
(ನ್ಯೂಸ್ ಕಡಬ) newskadaba.com, ನ 06 . ನವದೆಹಲಿ: ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಕಾರ್ಡ್ ಬದಲಿಗೆ ಮತದಾರರ ಗುರುತಿನ ಚೀಟಿ ಸಂಖ್ಯೆ ಹಾಗೂ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯಗೊಳಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಕೇಂದ್ರ ಪಂಚಾಯತ್ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಈ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಫಲಾನುಭವಿಗಳ ಗುರುತಿಸುವಿಕೆ ಮತ್ತು ಪಾವತಿ ಪ್ರಕ್ರಿಯೆಯಲ್ಲಿ ವೋಟರ್ ಐಡಿ ಬಳಸುವ ಬಗ್ಗೆ ತಿಳಿಸಿದ್ದಾರೆ. ಆಧಾರ್ ಕಾರ್ಡ್ ಸುಲಭವಾಗಿ ಪಡೆಯಲು ಸಾಧ್ಯವಿರುವುದರಿಂದ ಅದರ ವಿಶ್ವಾಸಾರ್ಹತೆಯ ಬಗ್ಗೆ ಸಚಿವರು ಪ್ರಶ್ನೆ ಎತ್ತಿದ್ದಾರೆ.
ಆದರೆ, ಯಾವೆಲ್ಲಾ ಸರ್ಕಾರಿ ಯೋಜನೆಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಇದೇ ವೇಳೆ, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಂತಹ ನಿಯಮ ಜಾರಿಯಾದರೆ, ಅರ್ಹ ಬಡ ಹಾಗೂ ಗ್ರಾಮೀಣ ಫಲಾನುಭವಿಗಳು ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ ಎಂದು ಸಿಪಿಐ ಆತಂಕ ವ್ಯಕ್ತಪಡಿಸಿದೆ.
ಈ ಪ್ರಸ್ತಾವನೆ ಜಾರಿಯಾದರೆ ಫಲಾನುಭವಿಗಳಿಗೆ ಹೊಸ ಸವಾಲು ಎದುರಾಗುವ ಸಾಧ್ಯತೆಯಿದೆ.




