ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಸುಳ್ಯದ ಮುಸ್ಲಿಂ ಯುವಕ ► ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಯುವತಿಯ ಕಡೆಯವರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.13. ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಮೋಸದ ಬಲೆಗೆ ಕೆಡವಿ ವಿವಾಹವಾಗಿದ್ದುದನ್ನು ಅರಿತ ಯುವತಿ ಹಾಗೂ ಸಂಬಂಧಿಕರು ಯುವಕನನ್ನು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ತೊಕ್ಕೊಟ್ಟು ಸಮೀಪದ ಕುಂಪಲದಲ್ಲಿ ನಡೆದಿದೆ.

ಆರೋಪಿ ಯುವಕನನ್ನು ಸುಳ್ಯ ತಾಲೂಕಿನ ಗೂನಡ್ಕ ನಿವಾಸಿ ನಝೀರ್ ಎಂಬವರ ಪುತ್ರ ಸಯ್ಯದ್ ಹಾರೂನ್ ರಶೀದ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಜಿಯೋ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ ಈತ ತನ್ನ ಹೆಸರನ್ನು ಅರುಣ್ ಪೂಜಾರಿ ಎಂದು ಪರಿಚಯಿಸಿಕೊಂಡು ತೊಕ್ಕೊಟ್ಟು ಸಮೀಪದ ಕುಂಪಲದ ಯುವತಿಯೋರ್ವಳನ್ನು ಯಾಮಾರಿಸಿ ಮದುವೆಯಾಗಿದ್ದಲ್ಲದೆ, ಮನೆ ಅಳಿಯನಾಗಿ ಹುಡುಗಿಯ ಮನೆಯಲ್ಲೇ ವಾಸವಾಗಿದ್ದ. ಇತ್ತೀಚೆಗೆ ತನ್ನ ಪತ್ನಿಯ ತಂಗಿಯ ಜೊತೆಯೂ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನುವ ಆರೋಪದಲ್ಲಿ ಅಕ್ಕ-ತಂಗಿ ಸೇರಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ಆತನ ವರ್ತನೆಯಿಂದ ಅನುಮಾನಗೊಂಡ ಪತ್ನಿ ವಿಚಾರಿಸಿದಾಗ ಸತ್ಯ ಹೊರಬಂದಿದ್ದು, ತಾನು ಮುಸ್ಲಿಮನಾಗಿದ್ದು, ಹಿಂದೂ ಎಂಬ ಮುಖವಾಡ ತೊಟ್ಟಿರುವುದನ್ನು ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.

Also Read  ಪುತ್ತೂರು: ಅಕ್ರಮ ಗಾಂಜಾ ಮಾರಾಟ ➤ ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

ಈ ಹಿನ್ನೆಲೆಯಲ್ಲಿ ಯುವತಿಯ ಕಡೆಯವರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!
Scroll to Top