(ನ್ಯೂಸ್ ಕಡಬ) newskadaba.com ಸುಳ್ಯ, ಜೂ.15. ಮೂವರು ಶಂಕಿತ ನಕ್ಸಲರು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಶುಕ್ರವಾರದಂದು ಬೆಳಿಗ್ಗೆ ಪ್ರತ್ಯಕ್ಷರಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡುಮಾಡಿದೆ.
ಇಂದು ಬೆಳಗ್ಗೆ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿ ಜಯರಾಮ ಎಂಬವರ ತೋಟದ ಬಳಿ ಶಸ್ತ್ರಸಜ್ಜಿತ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ನಡೆದುಕೊಂಡು ಹೋಗಿದ್ದು, ಸ್ಥಳೀಯರು ಈ ಬಗ್ಗೆ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಸುಳ್ಯ ಠಾಣಾ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ.