ಪುತ್ತೂರು: ಬೈಕ್ ಮಗುಚಿ ಬಿದ್ದು ನವ ವಿವಾಹಿತೆ ಮೃತ್ಯು



(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.27. ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡಿದ್ದ ನವ ವಿವಾಹಿತೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ಪುತ್ತೂರಿನಲ್ಲಿ ನಡೆದಿದೆ.







ಮೃತರನ್ನು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ಕಾಂತಪ್ಪ ಗೌಡರ ಪುತ್ರಿ, ಸುಳ್ಯ ತಾಲ್ಲೂಕಿನ ಬೆಳ್ಳಾರೆ ಕೊಡಿಬೈಲು ನಿವಾಸಿ ಗಿರೀಶ್ ಎಂಬವರ ಪತ್ನಿ ಸುನಂದ ಎಂದು ಗುರುತಿಸಲಾಗಿದೆ. ಪುತ್ತೂರಿನಲ್ಲಿ ಉದ್ಯೋಗದಲ್ಲಿದ್ದ ಸುನಂದ ಶನಿವಾರದಂದು ತನ್ನ ಸಹೋದರನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಮಗುಚಿ ಬಿದ್ದು ಸುನಂದಾ ರಸ್ತೆಗೆ ಎಸೆಯಲ್ಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಸುನಂದರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರದಂದು ಮೃತಪಟ್ಟಿದ್ದಾರೆ.






error: Content is protected !!
Scroll to Top