ಬೆಳ್ತಂಗಡಿ: ಐರಾವತ ಬಸ್ ಗೆ ಕಾರು ಡಿಕ್ಕಿ



(ನ್ಯೂಸ್ ಕಡಬ) newskadaba.com ,ಬೆಳ್ತಂಗಡಿ.ಜೂ.28. ಐರಾವತ ಬಸ್‌‌ಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದಂದು ನಡೆದಿದೆ.





ಬೆಂಗಳೂರಿನಿಂದ ಉಡುಪಿ ಕಡೆಗೆ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಹೊಗುತ್ತಿದ್ದ ಐರಾವತ ಬಸ್‌‌ ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಮುಗೇರಡ್ಕ ಎಂಬಲ್ಲಿಗೆ ತಲುಪುತ್ತಿದ್ದಂತೆ, ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರಿನ ಚಾಲಕನು ಕಾರನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಐರಾವತ ಬಸ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಐರಾವತ ಬಸ್‌ನ ಮುಂಬಾಗ ಬಲಬದಿ ಹಾಗೂ ಕಾರಿನ ಮುಂಬಾಗವು ಜಖಂಗೊಂಡಿದೆ. ಅಪಘಾತದಲ್ಲಿ ಪ್ರಯಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದೊಂದಿಗೆ ಪಾರಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top