ಮಂಗಳೂರು: ವೃತ್ತಿಪರ ಶಿಕ್ಷಣ ವಿದ್ಯಾರ್ಥಿಗಳಿಗೆ ಅರಿವು ಸಾಲ ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಹಾಗೂ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ (ಲಿ) ಇನೋಳಿ, ಕೊಣಾಜೆ ಇದರ ಜಂಟಿ ಸಹಯೋಗದೊಂದಿಗೆ ಜುಲೈ 7 ರಂದು ಬೆಳಿಗ್ಗೆ 9.30ಕ್ಕೆ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಇನೋಳಿ ಇದರ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಪಾರ್ಸಿ ಮತ್ತು ಸಿಖ್ಖ್ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಶೂನ್ಯ ಬಡ್ಡಿದರದಲ್ಲಿ ಇಂಜಿನಿಯರಿಂಗ್, ಆರ್ಕಿಟೆಕ್ಚ್ ರ್ ಮತ್ತು ಡಿಪ್ಲೊಮಾ ಹಾಗೂ ಇನ್ನಿತರ ಉನ್ನತ ವ್ಯಾಸಂಗಕ್ಕಾಗಿ ಕ ಸಕರ್ಾರದಿಂದ ಒದಗಿಸುವ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.

ಇದರ ಪ್ರಯೋಜನವನ್ನು ಉಭಯ ಜಿಲ್ಲೆಗಳ ಅಲ್ಪಸಂಖ್ಯಾತ ವಿದ್ಯಾಥರ್ಿಗಳು ಪಡೆದುಕೊಳ್ಳುವಂತೆ ಕರ್ನಾಟಕ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

 

 

 

 

error: Content is protected !!

Join the Group

Join WhatsApp Group