ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆ: ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

 (ನ್ಯೂಸ್ ಕಡಬ) newskadaba.com ಆಲಂಕಾರು,ಜು.06. ಶ್ರೀ ರಾಮಕುಂಜೇಶ್ವರ ವೃತ್ತಿಪರ ಶಿಕ್ಷಣ ಅಭಿವೃದ್ಧಿ ಕೇಂದ್ರ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ(ರಿ) ರಾಮಕುಂಜ ಹಾಗೂ ಶ್ರೀರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆ ರಾಮಕುಂಜ ಇದರ ಆಶ್ರಯದಲ್ಲಿ ಜುಲೈ 8ರಂದು ಬೆಳಿಗ್ಗೆ 11.30ಕ್ಕೆ 2018-19ನೇ ಸಾಲಿನ ಪೋಷಕರ ಸಮಾವೇಶ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪೇಜಾವರ ಅಧೋಕ್ಷಜ ಮಠ ಉಡುಪಿ ಶ್ರೀ.ವಿಶ್ವಪ್ರಸನ್ನ ತೀರ್ಥ ಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಶ್ರೀರಾಮಕುಂಜೇಶ್ವರ ವಿದ್ಯಾವರ್ಧಕ ಸಭಾ(ರಿ) ರಾಮಕುಂಜ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ .ಇ.ಕಲ್ಲೇರಿ ಅಧ್ಯಕ್ಷತೆ ವಹಿಸಲಿದ್ದಾರೆ. 2017-18 ನೇ ಎಸ್.ಎಸ್.ಎಸ್.ಸಿಯಲ್ಲಿ ಉತ್ತಮ ಅಂಕಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸುಮಾರು ಒಂದೂವರೆ ಲಕ್ಷದಷ್ಟು ಪ್ರೋತ್ಸಹ ಧನ ನೀಡಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಪ್ರಕಟಣೆಗೆ ತಿಳಿಸಿದ್ದಾರೆ.

Also Read  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಜ್ಞಾನೋದಯ ಬೆಥನಿ ನೆಲ್ಯಾಡಿಯ ಆದರ್ಶ್‍ಶೆಟ್ಟಿ

 

error: Content is protected !!
Scroll to Top