ಪಿಲಿಕುಳದ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ

(ನ್ಯೂಸ್ ಕಡಬ) newskadaba.com,ಜು.06. ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‍ನಲ್ಲಿ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮವು ನೆರವೇರಲಿದ್ದು, ಜುಲೈ 15 ರಂದು ಮೀನುಗಾರಿಕಾ ಇಲಾಖೆ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಪಿಲಿಕುಳ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮವು ಜಿಲ್ಲೆಯ ಮೀನು ಪ್ರಿಯರಿಗೆ ಸುವರ್ಣಾವಕಾಶವಾಗಿದೆ. ಈ ಹಬ್ಬದ ಅಂಗವಾಗಿ ಪಿಲಿಕುಳದ ಲೇಕ್ ಗಾರ್ಡನ್‍ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು, ಮುಗಿಯುವ ತನಕ ಮಾರಾಟ ಮಾಡಲಾಗುವುದು.

ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದ ಸಿಹಿ ನೀರಿನ ಮೀನುಗಳು, ಪಾಂಪ್ಲೆಟ್, ಅಂಜಲ್, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್ ಮಸಾಲಾ, ಫಿಶ್ ಕಬಾಬ್ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟ ಮಾಡಲಾಗುವುದು. ಇದರ ಜೊತೆಗೆ ಅಲಂಕಾರಿಕಾ ಮೀನುಗಳ ಪ್ರದರ್ಶನ ಮತ್ತು ಮಾರಾಟ ಕೂಡಾ ಇದೆ. ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಕಟಣೆ ತಿಳಿಸಿದೆ.

Also Read  ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

 

error: Content is protected !!
Scroll to Top