(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ತೀವ್ರ ಮಳೆಯ ಹಿನ್ನೆಲೆಯಲ್ಲಿ ಜುಲೈ 09 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅವರು ರಜೆ ಘೋಷಿಸಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ತೀವ್ರ ಮಳೆಯಾಗುತ್ತಿರುವುದರಿಂದಾಗಿ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಪ್ರಾಕೃತಿಕ ವಿಕೋಪದ ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರದಂದು ರಜೆ ಘೋಷಿಸಲಾಗಿದೆ.
Also Read ಯುವ ಜನರಿಗೆ ಕೌಶಲ್ಯಭಿವೃದ್ಧಿ ತರಬೇತಿಗಳನ್ನು ನೀಡಲು ಒತ್ತು ನೀಡಬೇಕು ➤ ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪ