(ನ್ಯೂಸ್ ಕಡಬ) newskadaba.com ಕಡಬ, ಜು.17. ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ ಹಾಗೂ ಟಾಟಾ ವೆಂಚರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ಸಂಭವಿಸಿದೆ.
ಭಟ್ಕಳ ಮೂಲದ ಕುಟುಂಬವೊಂದು ಟಾಟಾ ವೆಂಚರ್ ವಾಹನದಲ್ಲಿ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಕಲ್ಲಾಜೆ ತಿರುವಿನಲ್ಲಿ ಪರಸ್ಪರ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆಯೋರ್ವರ ಕೈ ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗುತ್ತಿದೆ.