ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ

ಕಡಬ: ಮಂಗಳೂರು ವಿಜಯ ಗ್ರಾಮೀಣ ಪ್ರತಿಷ್ಠಾನ, ಮರ್ದಾಳ ವಿಜಯ ಗ್ರಾಮೀಣ ಪ್ರತಿಷ್ಠಾನ ವತಿಯಿಂದ ಬಂಟ್ರ ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕವನ್ನು ದ್ಘಾಟಿಸಲಾಯಿತು. ಪ್ರಗತಿಪರ ಕೃಷಿಕ ಸುಭಾಷ್ ರೈ ಉದ್ಘಾಟಿಸಿ ಮಾತನಾಡಿ, ಜಲ ಜೀವನಕ್ಕೆ ಮೂಲಾಧಾರ. ಜಲ ಸಂರಕ್ಷಣೆ ಮಾಡುವುದು ನಮ್ಮ ಪೀಳಿಗೆಗೆ ನೀಡುವ ಮಹತ್ತರ ಕೊಡುಗೆಯಾಗಿದೆ. ಈ ನಿಟ್ಟನಲ್ಲಿ ಜಲಮರುಪೂರಣದ ಬಗ್ಗೆ ಹೆಚ್ಚಿ ಕಾಳಜಿ ವಹಿಸಬೇಕು ಎಂದರು.

ಮಂಗಳೂರು ವಿಜಯ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಮಾತನಾಡಿ, 1990ರಲ್ಲಿ ವಿಜಯ ಗ್ರಾಮೀಣ ಪ್ರತಿಷ್ಠಾನ ಪ್ರಾರಂಭಗೊಂಡಿದ್ದು ಬ್ಯಾಂಕ್‍ನಿಂದ ಹೊರತಾಗಿ ಕೃಷಿ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಜನೋಪಕಾರಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ನಾವು ಆಧುನಿಕವಾಗಿ ಬಹಳ ಮುಂದುವರೆದಿದ್ದೇವೆ. ಆದರೆ ನಮ್ಮ ಮುಂದುವರಿದ ಜೀವನದೊಂದಿಗೆ ಪರಿಸರ ಸಂರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು. ಮರ್ದಾಳ ವಿಜಯ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ , ಕಡಬ ಸಿಎ ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ ಅಧ್ಯಕ್ಷತೆ ವಹಿಸಿದ್ದರು. ಮರ್ದಾಳ ಸೈಂಟ್ ಮೇರಿಸ್ ಹೈಸ್ಕೂಲ್‍ನ ಮುಖ್ಯಗುರುಗಳಾದ ಈಶೋ ಪಿಲಿಪ್‍ರಿಗೆ ಗಿಡ ವಿತರಿಸಿದರು. ಮಂಗಳೂರು ವಿಜಯ ಗ್ರಾಮೀಣ ಪ್ರತಿಷ್ಠಾನದ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಬೆಳ್ಳಿಪ್ಪಾಡಿ, ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಎಂ, ತಾ.ಪಂ.ಸದಸ್ಯ ಗಣೇಶ್ ಕೈಕುರೆ, ಮರ್ದಾಳ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಮರ್ದಾಳ ವಿಜಯ ಗ್ರಾಮೀಣ ಪ್ರತಿಷ್ಠಾನದ ಕಾರ್ಯದರ್ಶಿ ಶಿವಪ್ರಸಾದ್ ಕೈಕುರೆ, ಎಪಿಎಂಸಿ ಸದಸ್ಯ ಮೇದಪ್ಪ ಗೌಡ ಡೆಪ್ಪುಣಿ, ಶಾಲಾ ಎಸ್‍ಡಿಎಂಸಿ ಉಪಾಧ್ಯಕ್ಷೆ ರೋಹಿಣಿ ಮಾತನಾಡಿ ಶುಭಹಾರೈಸಿದರು. ಶಾಲಾ ಮುಖ್ಯೋಪಧ್ಯಾಯಿನಿ ದೇವಕಿ ಸ್ವಾಗತಿಸಿ, ಶಾಲಾ ಶಿಕ್ಷಕ ರಾಮಕೃಷ್ಣ ಮಲ್ಲಾರ ವಂದಿಸಿದರು. ಶಿಕ್ಷಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು.

error: Content is protected !!

Join the Group

Join WhatsApp Group