ನೇರಳಕಟ್ಟೆ: ಚಲಿಸುತ್ತಿದ್ದ ಬಸ್ ಗೆ ಹಿಂದಿನಿಂದ ಕಾರು ಢಿಕ್ಕಿ ► ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ಪುತ್ತೂರು, ಆ.08. ಚಲಿಸುತ್ತಿದ್ದ ಬಸ್ಸಿಗೆ ಹಿಂದಿನಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬುಧವಾರ ರಾತ್ರಿ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪ ಸಂಭವಿಸಿದೆ.







ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಮಹೇಶ್ ಸಂಸ್ಥೆಯ ಖಾಸಗಿ ಬಸ್ ನೇರಳಕಟ್ಟೆ ಸಮೀಪದ ಗಣೇಶ ನಗರ ಎಂಬಲ್ಲಿ ತಲುಪಿದಾಗ ಮಾರುತಿ ಆಲ್ಟೋ ಕಾರು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.






error: Content is protected !!
Scroll to Top