ಪೆರಿಯಶಾಂತಿ: ಭಾರೀ ಗಾಳಿಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ ► ಮುಂದೇನಾಯಿತು ಗೊತ್ತೇ..?



(ನ್ಯೂಸ್ ಕಡಬ) newskadaba.com ಕಡಬ, ಆ.13. ಕರಾವಳಿ ಪ್ರದೇಶದಲ್ಲಿ ಮಳೆಯ ಅಬ್ಬರ ತೀವ್ರಗೊಂಡಿರುವುದರ ನಡುವೆಯೇ ಟೂರಿಸ್ಟ್ ಕಾರೊಂದರ ಮೇಲೆ ಮರ ಬಿದ್ದು ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ ಸಮೀಪ ಸೋಮವಾರ ಸಂಜೆ ನಡೆದಿದೆ.







ಬೆಂಗಳೂರು ಮೂಲದ ಯಾತ್ರಾರ್ಥಿಗಳಿದ್ದ ಟೊಯೋಟಾ ಇಟಿಯೋಸ್ ಕಾರು ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸಮಯ ಪೆರಿಯಶಾಂತಿ ತಲುಪಿದಾಗ ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top