ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಕರಾವಳಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದು, ವಿವರ ಈ ಕೆಳಗಿನಂತಿವೆ.

ಸೆಪ್ಟಂಬರ್ 7 ಶುಕ್ರವಾರ ರಂದು ಪೂರ್ವಾಹ್ನ 8.50 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9 ಗಂಟೆಗೆ ಮಂಗಳೂರಿನಿಂದ ರಸ್ತೆಯ ಮೂಲಕ ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ, ಮಂಗಳೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 9.55 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಮತ್ತೆ ಸುದ್ದಿಯಾದ ಕಡಬದ MSIL ಮದ್ಯದಂಗಡಿ ► ಅಂಗಡಿಯ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ

error: Content is protected !!
Scroll to Top