ಸುಳ್ಯ: 13 ವರ್ಷದ ಬಾಲಕಿಯ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಭೂಪ ► ಬುದ್ಧಿವಂತರ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ



(ನ್ಯೂಸ್ ಕಡಬ) newskadaba.com ಸುಳ್ಯ, ಸೆ.07. ಹದಿಮೂರು ವಯಸ್ಸಿನ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಬಾಲಕಿ ಗರ್ಭಿಣಿಯಾದ ಘಟನೆ ಸುಳ್ಯ ಠಾಣಾ ವ್ಯಾಪ್ತಿಯ ಸಂಪಾಜೆಯಲ್ಲಿ ನಡೆದಿದೆ.







ಕಳೆದ ಸುಮಾರು ಎರಡು ತಿಂಗಳುಗಳಿಂದ ಸಂಪಾಜೆಯ ಬಾಲಕಿಯ ಮನೆಯಲ್ಲಿಯೇ ವಾಸವಿದ್ದ ಅವರ ದೂರದ ಸಂಬಂಧಿ ಗೋಪಾಲಕೃಷ್ಣ ಎಂಬಾತ ರಾತ್ರಿ ಮನೆಯವರೆಲ್ಲರೂ ಮಲಗಿದ ನಂತರ ಬಲಾತ್ಕಾರವಾಗಿ ಬಾಲಕಿಯ ಮೇಲೆ ಅತ್ಯಾಚಾರಗೈದುದರಿಂದ ಬಾಲಕಿಯು ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ‌. ಕೆಲವು ಸಮಯಗಳಿಂದ ಬಾಲಕಿಯು ಮನೆಯವರೊಂದಿಗೆ ಸರಿಯಾಗಿ ಮಾತನಾಡದೇ ಇದ್ದುದರಿಂದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿ, ಬಾಲಕಿಯನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top