ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಮಾತನಾಡಿ,ಕಾಲೇಜಿನ ಬೆಳವಣಿಗೆಯಲ್ಲಿ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಜೊತೆಗೆ ಪೋಷಕರ ಪಾತ್ರ ಮುಖ್ಯ ಎಂದರು.
ಮುಖ್ಯ ಅತಿಥಿ ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯ ಶಾಸ್ತ್ರ ವಿಭಾಗದ ಡಾ. ಶಿಶಿರ್ ಕುಮಾರ್,ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನದಿಂದ ಅವರ ಮಾನಸಿಕ ಸ್ಥೈರ್ಯ ಬೆಳೆಸಿ ಮಕ್ಕಳಿಗೆ ಸೋತು ಗೆಲ್ಲುವುದನ್ನು ತಿಳಿಸಿಕೊಡಬೇಕು ಎಂದರು.
ಸಂಸ್ಥೆಯ ಆಡಳಿತಾಽಕಾರಿ ಅಶ್ವಿನಿ ಎಲ್. ಶೆಟ್ಟಿ , ಶಿಸ್ತು ಮತ್ತು ವಿಧೇಯತೆ ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯ ಎಂದರು.
ರಕ್ಷಕ – ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಮುರಲೀಧರ ಕೆ.ಜಿ ,ಉಪಾಧ್ಯಕ್ಷರಾಗಿ ಸುಲೈಮಾನ್ ಅವರನ್ನು ಆಯ್ಕೆಯಾದರು. ಇಂಗ್ಲೀಷ್ ಉಪನ್ಯಾಸಕಿಯಾದ ರಶ್ಮಿ ಕೆ ಇವರು ಸಮಿತಿ ರಚನೆ ಮಾಡಿದರು.ರಕ್ಷಕ -ಶಿಕ್ಷಕ ಸಂಘದ ನಿಕಟ ಪೂರ್ವಾಧ್ಯಕ್ಷ ಬಾಲಕೃಷ್ಣ ರೈ ಅನಿಸಿಕೆ ವ್ಯಕ್ತಪಡಿಸಿದರು.
ಸಂಸ್ಥೆಯ ಪ್ರಾಚಾರ್ಯೆ ರಾಜಲಕ್ಷ್ಮೀ ಎಸ್. ರೈ ,ಕಾಲೇಜಿನ ನೀತಿ ನಿಯಮಗಳನ್ನು ತಿಳಿಸಿದರು.
ಈ ಸಂದರ್ಭ ಪ್ರಥಮ ಮತ್ತು ದ್ವಿತೀಯ ವರ್ಷದ ಬಿ.ಎ., ಬಿ.ಕಾಂ. ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ಕೊಟ್ಟು ಪ್ರೋತ್ಸಾಹಿಸಲಾಯಿತು.
ಹಿಂದಿನ ವರ್ಷದ ರಕ್ಷಕ ಶಿಕ್ಷಕ ಸಂಘದ ವರದಿಯನ್ನು ಅರ್ಥಶಾಸ್ತ್ರ ಉಪನ್ಯಾಸಕಿ ಅಕ್ಷತಾ ಎಂ ಇವರು ವಾಚಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಗುರುರಾಜ್ ಪ್ರಾರ್ಥಿಸಿದರು.ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಎಂ ಇವರು ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ರವಿಕುಮಾರ್ ಇವರು ವಂದಿಸಿದರು. ಇತಿಹಾಸ ಉಪನ್ಯಾಸಕ ಲೋಕೇಶ್ ನಿರೂಪಿಸಿದರು.