ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ► ಶ್ರೀ ಧರ್ಮಪಾಲನಾಥ ಸ್ವಾಮೀಜಿಗೆ ಪೂರ್ಣಕುಂಭ ಸ್ವಾಗತ – ವೈಭವದ ಮೆರವಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ, ಯುವ ಒಕ್ಕಲಿಗ ಗೌಡ ಸಂಘ ಇದರ ಆಶ್ರಯದಲ್ಲಿ ಸಂಘದ ನೂತನ ಸಮಿತಿಯ ಪದಗ್ರಹಣ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಸಮಾರಂಭವು ಕಡಬ ಒಕ್ಕಲಿಗ ಗೌಡ ಸಮಾಜ ಮಂದಿರದಲ್ಲಿ ಭಾನುವಾರದಂದು ಬಹಳ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಡಬದ ಪಂಜ ಕ್ರಾಸ್ ರಸ್ತೆಯ ಬಳಿಯಲ್ಲಿ ಪೂರ್ಣ ಕುಂಭ ಸ್ವಾಗತ ನೀಡಿ ಬಳಿಕ ಕಡಬ ಪೇಟೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರುರವರನ್ನು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

Also Read  ಮಂಗಳೂರು: ಅಕ್ರಮ ಗೋಮಾಂಸ ಸಾಗಾಟ ➤ ನಾಲ್ವರ ಬಂಧನ

error: Content is protected !!
Scroll to Top