ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ – ಲೀಟರಿಗೆ 2 ರೂ.ನಷ್ಟು ಕಡಿತ ► ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಪೆಟ್ರೋಲ್ ಮೇಲಿನ ತೆರಿಗೆ ಇಳಿಸುವುದರಿಂದಾಗಿ ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯಲ್ಲಿ 2 ರೂ. ಕಡಿತಗೊಳ್ಳಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಪಕ್ಷವು ಭಾರತ ಬಂದ್ ನಡೆಸಿತ್ತಾದರೂ ಕೇಂದ್ರ ಸರಕಾರವು ತೈಲ ಬೆಲೆಯನ್ನು ದಿನೇ ದಿನೇ ಏರಿಸಿತ್ತು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರವು ಇದೀಗ ತೈಲ ಬೆಲೆಯ ಮೇಲಿನ ತೆರಿಗೆಯನ್ನು ತುಸು ಕಡಿತಗೊಳಿಸುವುದಾಗಿ ಘೋಷಿಸಿದೆ.

Also Read  ಹಳೆಯ ಮೋಟರ್ ಸೈಕಲ್, ಹಳೆಯ ಓಮ್ನಿ ಹರಾಜು- ಪ್ರಕಟಣೆ

error: Content is protected !!
Scroll to Top