ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗುವ ಸಂಭವದ ಹಿನ್ನೆಲೆ ► ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.09. ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವ ಇರುವುದರಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆಯವರು ನೀಡಿದ ಹವಾಮಾನ ಮುನ್ಸೂಚನೆಯನ್ನು ಆಧರಿಸಿ ಎಲ್ಲಾ ಮೀನುಗಾರರು  ಅಕ್ಟೋಬರ್ 13 ರವರೆಗೆ ಪಶ್ಚಿಮ ಮಧ್ಯ ಅರಬ್ಬಿ ಸಮುದ್ರದ ಆಳ ಪ್ರದೇಶದಲ್ಲಿ ಮತ್ತು ಅಕ್ಟೋಬರ್ 10 ರವರೆಗೆ ನೈರುತ್ಯ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಪುಣಚದಲ್ಲಿ ರಸ್ತೆ ಅತಿಕ್ರಮಣ ಪ್ರಕರಣ ➤ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಪ್ರತಿಭಟನೆ

error: Content is protected !!
Scroll to Top