ತಿತ್ಲಿ ಚಂಡಮಾರುತಕ್ಕೆ ಉಳ್ಳಾಲ, ಉಚ್ಚಿಲದಲ್ಲಿ ಪ್ರಕ್ಷುಬ್ಧಗೊಂಡ ಕಡಲು ► ಪಣಂಬೂರಿನಲ್ಲಿ ಹೈ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಒರಿಸ್ಸಾದಲ್ಲಿ ಕಾಣಿಸಿಕೊಂಡ ತಿತ್ಲಿ ಚಂಡಮಾರುತದ ಪ್ರಭಾವದಿಂದ ಉಳ್ಳಾಲ, ಸೋಮೇಶ್ವರ, ಉಚ್ಚಿಲ, ಪಣಂಬೂರು ಸೇರಿದಂತೆ ಕರಾವಳಿಯಲ್ಲಿ ಕಡಲಿನ ಅಬ್ಬರ ಜೋರಾಗಿದೆ.

ಬುಧವಾರ ಮುಂಜಾನೆಯಿಂದ ಕಡಲು ಪ್ರಕ್ಷುಬ್ಧಗೊಂಡಿದ್ದು, ಸಮುದ್ರದ ಅಲೆಗಳು ಭಾರೀ ಎತ್ತರಕ್ಕೆ ಅಪ್ಪಳಿಸುತ್ತಿವೆ. ಉಳ್ಳಾಲ ಪರಿಸರದಲ್ಲಿ ರಸ್ತೆಯನ್ನೂ ದಾಟಿದ ಸಮುದ್ರದ ನೀರು ಕೆಲವು ಮನೆಗಳಿಗೆ ಮುನ್ನುಗ್ಗಿವೆ. ಪಣಂಬೂರು ಬೀಚ್‌ನಲ್ಲಿ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ.

Also Read  ಎಟಿಎಂ ಕಳ್ಳತನಕ್ಕೆ ಯತ್ನ- ನಾಲ್ವರ ಬಂಧನ

error: Content is protected !!
Scroll to Top