ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲ್ವೇ ಹಳಿಯಲ್ಲಿ ಗಂಡಸಿನ ಮೃತದೇಹ ಪತ್ತೆ ► ರೈಲು ಢಿಕ್ಕಿಯಾಗಿ ಛಿದ್ರಗೊಂಡ ಅಪರಿಚಿತ ಮೃತದೇಹ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.13. ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲ್ವೇ ಮಾರ್ಗದಲ್ಲಿ ರೈಲಿನಡಿಗೆ ಸಿಲುಕಿ ಮೃತಪಟ್ಟ ಸ್ಥಿತಿಯಲ್ಲಿ ಗಂಡಸಿನ ಮೃತದೇಹವೊಂದು ಬಂಟ್ವಾಳ ಸಮೀಪದ ಮಾರ್ನಬೈಲು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ.







ಮೆಲ್ಕಾರ್ ಸಮೀಪದ ಮಾರ್ನಬೈಲು ಬಳಿ ರೈಲ್ವೇ ಹಳಿಯಲ್ಲಿ ಅಪರಿಚಿತ ಗಂಡಸಿನ ರುಂಡ ಮತ್ತು ದೇಹ ಛಿದ್ರಗೊಂಡು ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನಿಂದ ಸುಬ್ರಹ್ಮಣ್ಯ ರೋಡ್ ಗೆ ತೆರಳುವ ಲೋಕಲ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ‌. ಮೃತ ವ್ಯಕ್ತಿಗೆ 35 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top