ಬಂಟ್ವಾಳ: ಡ್ಯಾಂನಿಂದ ಹೆಚ್ಚುವರಿ ನೀರು ನೇತ್ರಾವತಿ ನದಿಗೆ ಬಿಡುಗಡೆ ► ಸ್ನಾನಕ್ಕೆಂದು ತೆರಳಿ ನದಿ ಮಧ್ಯದಲ್ಲಿ ಸಿಲುಕಿಕೊಂಡ ಐವರು ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.24. ನೇತ್ರಾವತಿ ನದಿಗೆ ಆಟವಾಡಲು ತೆರಳಿದ್ದ ವೇಳೆ ಡ್ಯಾಂನಿಂದ ಏಕಾಏಕಿ ನೀರು ಬಿಟ್ಟ ಪರಿಣಾಮ ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನೀರಿನಲ್ಲಿ ಸಿಲುಕಿಕೊಂಡ ಘಟನೆ ಬಂಟ್ವಾಳದಲ್ಲಿ ಬುಧವಾರದಂದು ನಡೆದಿದೆ.

ತಾಲೂಕಿನ ನಾವೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬುಧವಾರದಂದು ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಶಾಲೆಗೆ ರಜೆಯಿದ್ದುದರಿಂದ ನಾವೂರ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಹರಿಯುತ್ತಿರುವ ನೇತ್ರಾವತಿ ನದಿಗೆ ವಿದ್ಯಾರ್ಥಿಗಳ ತಂಡವೊಂದು ಆಟವಾಡಲು ತೆರಳಿದ್ದು, ಈ ವೇಳೆ ಇಲ್ಲಿಗೆ ಸಮೀಪದ ಡ್ಯಾಂನಿಂದ ನೀರನ್ನು ಹೊರಬಿಡಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗುದನ್ನು ಕಂಡ ಕೆಲವು ವಿದ್ಯಾರ್ಥಿಗಳು ಈಜಿ ದಡ ಸೇರಿದರಾದರೂ, ಉಳಿದ  ಐವರು ವಿದ್ಯಾರ್ಥಿಗಳು ಈಜಲು ಸಾಧ್ಯವಾಗದೇ ನದಿಯ ಮಧ್ಯದಲ್ಲಿನ ದೊಡ್ಡ ಬಂಡೆಕಲ್ಲಿನ ಮೇಲೆ ಹತ್ತಿ ಕುಳಿತಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸಹಾಯಕ್ಕಾಗಿ ಬೊಬ್ಬೆ ಹಾಕಿದ್ದರಿಂದ ಸ್ಥಳೀಯ ಈಜು ಪಟುಗಳು ನದಿಗೆ ಧುಮುಕಿ ಹಗ್ಗದ ಮೂಲಕ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

Also Read  ಸುಳ್ಯ: ಕಾರು, ಲಾರಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಸವಾರ ಗಂಭೀರ

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top