ಉಪ್ಪಿನಂಗಡಿ: ಐದು ವಾಹನಗಳ ನಡುವೆ ಸರಣಿ ಅಪಘಾತ ► ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಕಾರು, ಆಟೋರಿಕ್ಷಾ, ಪಿಕಪ್ ಹಾಗೂ ಬಸ್ಸುಗಳೆರಡರ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ ಹಲವರು‌ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಕ್ರಾಸ್ ಬಳಿ ಶುಕ್ರವಾರದಂದು ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಏಕಮುಖವಾಗಿ ತೆರಳುತ್ತಿದ್ದ ಕಾರು, ಆಟೋರಿಕ್ಷಾ, ಪಿಕಪ್ ಹಾಗೂ ಬಸ್ಸುಗಳೆರಡರ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ವಾಹನಗಳಲ್ಲಿದ್ದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group