ಭಾರತದ 14ನೇ ರಾಷ್ಟ್ರಪತಿಯಾಗಿ ಇಂದು ಕೋವಿಂದ್ ಪ್ರಮಾಣ ವಚನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.25. ಭಾರತದ 14 ನೇ ರಾಷ್ಟ್ರಪತಿಯಾಗಿ ಎನ್ ಡಿಎಯ ರಾಮನಾಥ್ ಕೋವಿಂದ್ ಪಾರ್ಲಿಮೆಂಟಿನ ಸೆಂಟ್ರಲ್ ಹಾಲಿನಲ್ಲಿ ಮಂಗಳವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರಿಗೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಜೆ.ಎಸ್.  ಖೇಹರ್ ಪ್ರಮಾಣ ವಚನ ಬೋಧಿಸಲಿದ್ದಾರೆ.

ಜುಲೈ 17 ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ರಾಮನಾಥ್ ಕೋವಿಂದ್ ಸೋಲಿಸಿದ್ದು, ಭಾರತದ 14ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ವಿವಿಧ ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯಪಾಲರು, ಕೇಂದ್ರ ಸಚಿವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

Also Read  ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

 

error: Content is protected !!
Scroll to Top