(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12. ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಎಚ್.ಎನ್. ಅನಂತಕುಮಾರ್ (59) ಅನಾರೋಗ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದರು.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಸೋಮವಾರ ಬೆಳಗ್ಗಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಿ ಮೃತರ ಅಂತಿಮ ದರ್ಶನ ಪಡೆಯಲಿದ್ದಾರೆ.