ಮಂಗಳೂರು: ಆರನೇ ಮಹಡಿಯಿಂದ ಕೆಳಗೆ ಹಾರಿದ ಕಾಲೇಜು ವಿದ್ಯಾರ್ಥಿ ► ಮುಂದೇನಾಯ್ತು ಗೊತ್ತೇ‌‌‍..?

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜಿನ ಆರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಗರದ ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾತನನ್ನು ಸುರತ್ಕಲ್ ಎನ್‌ಐಟಿಕೆ ಕಾಲೇಜಿನ ಮೂರನೇ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ, ಮಹಾರಾಷ್ಟ್ರ ಮೂಲದ ಆನಂದ ಪಾಠಕ್ (20) ಎಂದು ಗುರುತಿಸಲಾಗಿದೆ. ಹಾಜರಾತಿ ಕಡಿಮೆ ಇದ್ದ ಹಿನ್ನೆಲೆಯಲ್ಲಿ ಉಪನ್ಯಾಸಕರೋರ್ವರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಹೀಯಾಳಿಸಿದ್ದರೆನ್ನಲಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  2019-20ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ

error: Content is protected !!
Scroll to Top