ಖ್ಯಾತ ನಟ ಅಂಬರೀಶ್ ನಿಧನದ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತ ► ಹಿರಿಯ ರಾಜಕಾರಣಿ ಜಾಫರ್ ಶರೀಫ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.25. ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದ್ದು, ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ (85) ಭಾನುವಾರದಂದು ನಿಧನರಾಗಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಆಪ್ತರಾಗಿ ಗುರುತಿಸಿಕೊಂಡಿದ್ದ ಜಾಫರ್ ಶರೀಫ್ ರವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ
ಶುಕ್ರವಾರದಂದು ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

Also Read  ಅಪಘಾತದಿಂದ ಮೆದುಳು ನಿಷ್ಕ್ರಿಯ..!   ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ

error: Content is protected !!
Scroll to Top