ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಪಾದಚಾರಿಯೋರ್ವರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಪಾದಚಾರಿಯನ್ನು ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೂಳೂರು ನಿವಾಸಿ ಭೋಜ(45) ಎಂದು ಗುರುತಿಸಲಾಗಿದೆ. ಅವರು ರಾತ್ರಿ ತನ್ನ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ಭೋಜರವರಿಗೆ ಢಿಕ್ಕಿ ಹೊಡೆದಿದ್ದಲ್ಲದೆ ಅವರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ - ಬಾಲಕಿಯರ ಕಬಡ್ಡಿ ಪಂದ್ಯಾಟ

error: Content is protected !!
Scroll to Top