ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.01. ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಲಾಯ್ಲದಲ್ಲಿ ಶನಿವಾರದಂದು ನಡೆದಿದೆ.







ಮೃತರನ್ನು ಕಣ್ಣಾಜೆಬೈಲ್ ನಿವಾಸಿ ಯೋಗೀಶ್ (34) ಎಂದು ಗುರುತಿಸಲಾಗಿದೆ. ಯೋಗೀಶ್ ಶನಿವಾರದಂದು ಬೆಳ್ತಂಗಡಿ ತಾಲೂಕಿನ ಲಾಯ್ಲ ಸಮೀಪದ ಓಡದಕರಿಯ ದೇವಸ್ಥಾನದ ಬಳಿಯ ತೋಟವೊಂದರಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡ ಯೋಗೀಶ್ ರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top