ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.03. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಮೆಲ್ಕಾರ್ ನಲ್ಲಿ ಸಂಭವಿಸಿದೆ.

ಮೃತ ಮಹಿಳೆಯನ್ನು ಮೆಲ್ಕಾರ್ ಸಮೀಪದ ಬೋಗೋಡಿ ನಿವಾಸಿ ಅತಾವುಲ್ಲಾ ಎಂಬವರ ಪತ್ನಿ ರುಕ್ಸಾನಾ (26) ಎಂದು ಗುರುತಿಸಲಾಗಿದೆ. ರುಕ್ಸಾನಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸಾಮಾಗ್ರಿ ಖರೀದಿಗೆಂದು ಬಂದಿದ್ದು, ಹಿಂತಿರುಗಲೆಂದು ಬೋಗೋಡಿ ಸಮೀಪ ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ದೇಶದೆಲ್ಲೆಡೆ ಸಂವಿಧಾನ ದಿವಸವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ, ➤ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಭಾಷಣ ಸ್ಪರ್ಧೆ

error: Content is protected !!
Scroll to Top