ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16. ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರಸ್ತಾಪಿಸಲಾಗಿರುವ 21 ಕಿ ಮೀ ಉದ್ದದ ಸುರಂಗ ಕಾಮಗಾರಿಯನ್ನು ಆರು ತಿಂಗಳೊಳಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರದಂದು ವಿಧಾನ ಪರಿಷತ್ತಿನಲ್ಲಿ ತೇಜಸ್ವಿನಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಂಗಳೂರು ಮತ್ತು ಬೆಂಗಳೂರಿನ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಂಗ ಮಾರ್ಗ ನಿರ್ಮಿಸುವುದರಿಂದ ಸಂಚಾರಕ್ಕೆ ಅನುಕೂಲವಾಗಲಿದ್ದು, ಸಮಯ ಉಳಿತಾಯವಾಗಲಿದೆ ಎಂದರು. ಇದರಿಂದಾಗಿ ವ್ಯಾಪಾರ ಕ್ಷೇತ್ರದಲ್ಲೂ ಮಹತ್ತರ ಬದಲಾವಣೆಗಳಾಗಲಿವೆ ಎಂದವರು ತಿಳಿಸಿದ್ದಾರೆ.

Also Read  ಎಟಿಎಂ ನಿಂದ ನಗದು ದೋಚಿದ ಖತರ್ನಾಕ್ ಕಳ್ಳರು

error: Content is protected !!
Scroll to Top