(ನ್ಯೂಸ್ ಕಡಬ) newskadaba.com.ಮಂಗಳೂರು, ಜ.1.ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2018-19 ನೇ ಸಾಲಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳಿಂದ ಅವಿರತವಾಗಿ ಸೇವೆ ಸಲ್ಲಿಸಿರುವ ಸ್ವಯಂಸೇವಾ ಸಂಸ್ಥೆ ಹಾಗೂ ವ್ಯಕ್ತಿಗಳು ಸ್ವಯಂ ಸೇವಾ ಸಂಸ್ಥೆಗಳಿಂದ ಹಾಗೂ ಇತರೆ 5 ಕ್ಷೇತ್ರಗಳಾದ ಕ್ರೀಡೆ, ಕಲೆ, ಸಾಹಿತ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವ ಅಪಾಯದಿಂದ ಪಾರು ಮಾಡಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತಾವನೆಯನ್ನು ಜನವರಿ 10 ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಾಸ್ಟೋರ್, ಅಶೋಕನಗರ ಅಂಚೆ, ಮಂಗಳೂರು-575006 ಈ ಕಚೇರಿಯಿಂದ ನಿಗದಿತ ನಮೂನೆಯನ್ನು ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ ಸಂಪರ್ಕಿಸಲು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.









