ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್

(ನ್ಯೂಸ್ ಕಡಬ)newskadaba.com.ನವದೆಹಲಿ, ಜ.7. ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ  ಭರ್ಜರಿ ಆಫರ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ನಲ್ಲಿ ಮೀಸಲಾತಿ  ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು  ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಮೀಸಲಾತಿ ಜಾರಿಯಾದಲ್ಲಿ 8 ಲಕ್ಷ ರೂ. ಆಹೊಂದಿರುವ ಸಾಮಾನ್ಯ ವರ್ಗದ ಕುಟುಂಬದ ಸದಸ್ಯರಿಗೆ ಉದ್ಯೋಗ ಸಿಗಲಿದೆ.ಆರ್ಥಿಕವಾಗಿ ಹಿಂದುಳಿದಿದ್ದರೂ ಪ್ರಸ್ತುತ ಉದ್ಯೋಗದಿಂದ ವಂಚಿತರಾಗಿರುವ ಸಾಮಾನ್ಯ ವರ್ಗದವರಿಗೂ ಉದ್ಯೋಗ ನೀಡಲು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಮೀಸಲಾತಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

 

error: Content is protected !!

Join the Group

Join WhatsApp Group