ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.10. ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 26ರಿಂದ 28ರವರೆಗೆ ಏರ್ಪಡಿಸಲಾಗಿದೆ.

ತರಕಾರಿ ಕೆತ್ತನೆ, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುವುದು. ಸ್ವಸಹಾಯ ಗುಂಪುಗಳು, ಸ್ತ್ರೀಶಕ್ತಿ ಸಂಘಗಳು ತಮ್ಮ ಉತ್ಪಾದಕ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

Also Read  ಮಂಗಳೂರು: ಅಪರಿಚಿತ ತಂಡದಿಂದ ಚೂರಿ ಇರಿತ

ಮಳಿಗೆ ತೆರೆಯಲು ಆಸಕ್ತರು ತಮ್ಮ ಹೆಸರನ್ನು ಜನವರಿ 20 ರ ಮುಂಚಿತವಾಗಿ ನೋಂದಾಯಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮತ್ತು ಹೆಸರು ನೋಂದಾಯಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣ ಬೆಂದೂರು, ಮಂಗಳೂರು ದೂರವಾಣಿ ಸಂ: 9845523944/0824-2444298. ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

error: Content is protected !!
Scroll to Top