ಕನಕ ಕೀರ್ತನ ಗಾಯನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.25. ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಪ್ರತಿವರ್ಷ ಏರ್ಪಡಿಸುತ್ತಿರುವ ಕನಕ ಕೀರ್ತನ ಗಾಯನ ಕಾರ್ಯಕ್ರಮವನ್ನು ಫೆಬ್ರವರಿ 9 ರಂದು ಪೂರ್ವಾಹ್ನ 10 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ ಇಲ್ಲಿ  ನಡೆಸಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು  ಕನ್ನಡದ ಖ್ಯಾತ ಕವಿಯಿತ್ರಿ ಮತ್ತು ಚಿಂತಕಿ ಪ್ರತಿಭಾ ನಂದಕುಮಾರ್, ಇವರು ನೆರವೇರಿಸಲಿರುವರು.

 

‘ಸಾಮುದಾಯಿಕ ಪಾಲ್ಗೊಳ್ಳುವಿಕೆ’ಯ ಆಶಯದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳುತ್ತಿರುವ  ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜು ಹಾಗೂ ಘಟಕ ಕಾಲೇಜುಗಳು ಅಲ್ಲದೆಯೇ ಮಂಗಳೂರು ತಾಲೂಕು ವ್ಯಾಪ್ತಿಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು, ಆಡಳಿತ ವರ್ಗದವರು ಅಲ್ಲದೆ ದಕ್ಷಿಣ ಕನ್ನಡ ಮತ್ತು ಉಡುಪಿ ತಾಲೂಕು ವ್ಯಾಪ್ತಿಯ ಸಾರ್ವಜನಿಕ ವಲಯದಿಂದಲೂ ಅಭ್ಯರ್ಥಿಗಳು ಪಾಲ್ಗೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ವ್ಯಾಪ್ತಿಯ ರಾಜೀವ ಗಾಂಧಿ ವೈದ್ಯಕೀಯ ಶಿಕ್ಷಣ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿಗಳು, ಅಧ್ಯಾಪಕರು, ಆಡಳಿತ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕಾರ್ಯಕ್ರಮವನ್ನು ಹೆಚ್ಚು ಜನಪ್ರಿಯಗೊಳಿಸುವ ಹಿನ್ನೆಲೆಯಲ್ಲಿ, ಶಾಸ್ತ್ರೀಯ ಹಾಗೂ ಸಾಂಪ್ರದಾಯಿಕ ಭಜನೆ ಮಟ್ಟು ಮತ್ತು ಜನಪದ ಧಾಟಿಗಳಲ್ಲದೆಯೇ, ಆಧುನಿಕ ಸಂಗೀತ ಸಾಧನಗಳನ್ನು ಬಳಸಿ ಹೊಸರಾಗಗಳಲ್ಲಿಯೂ ಕನಕದಾಸರ ಕೀರ್ತನೆಗಳನ್ನು ಹಾಡಬಹುದು  ಈಗಾಗಲೇ ಕ್ಯಾಸೆಟ್ಟುಗಳ ಮೂಲಕ ಚಾಲ್ತಿಯಲ್ಲಿರುವ ಮತ್ತು ಜನಪ್ರಿಯಗೊಂಡಿರುವ ಹಾಡುಗಳಿಗಿಂತ ಚಾಲ್ತಿಯಲ್ಲಿರದ ಕೀರ್ತನೆಗಳಿಗೆ ಹೊಸದಾಗಿ ರಾಗ ಸಂಯೋಜಿಸಿ ಪ್ರಾಯೋಗಿಕವಾಗಿ ಹಾಡುವ ಸೃಜನಶೀಲತೆಗೆ ವಿಶೇಷ ಆದ್ಯತೆಯನ್ನು ನೀಡಲಾಗುವುದು.

ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿ ಮತ್ತು ಅಧ್ಯಾಪಕ ಆಡಳಿತವರ್ಗ ಹಾಗೂ ಸಾರ್ವಜನಿಕ ವಲಯಗಳಿಂದ ಆಯ್ಕೆಯಾಗುವ ತಲಾ ಮೂವರು ಅಭ್ಯರ್ಥಿಗಳಿಗೆ ತಲಾ ರೂ. 3,000/ ದಂತೆ ನಗದು ಪುರಸ್ಕಾರವನ್ನು ಮತ್ತು  ‘ಕನಕ ಸ್ಮರಣಿಕೆ’ಗಳನ್ನು ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯುವ ಕನಕ ಸ್ಮೃತಿ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು.  ಕನಕ ಕೀರ್ತನ ಕಾರ್ಯಕ್ರಮದಂದು ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 7 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಬೇಕು (ದೂರವಾಣಿ ಸಂಖ್ಯೆಯ ಸಹಿತ) ಅಥವಾ ತಮ್ಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರದೊಂದಿಗೆ ಮು0ಚಿತವಾಗಿ ತಮ್ಮ ಹೆಸರನ್ನು ಕನಕದಾಸ ಸಂಶೋಧನಾ ಕೇಂದ್ರದಲ್ಲಿ ನೋ0ದಾಯಿಸಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ   ದೂ. ಸಂಖ್ಯೆ-0824-2284360 : 9591480138, 9731906563 ಇ-ಮೇಲ್ ವಿಳಾಸ :: kanakabhakthi@yahoo.com  ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group