ನಾಳೆಯಿಂದ ಕಡಬದಲ್ಲಿ 1326 ನೇ ಮದ್ಯವರ್ಜನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ.28. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಡಬ-ಬಿಳಿನೆಲೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ 1326 ನೇ ಮದ್ಯವರ್ಜನ ಶಿಬಿರ ಜನವರಿ 29 ರಿಂದ ಫೆ 05 ರ ತನಕ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

 

ಜ. 29 ನೇ ಮಂಗಳವಾರ ಶಿಬಿರವನ್ನು ನಿವೃತ್ತ ಮುಖ್ಯಶಿಕ್ಷಕ ಸಾಂತಪ್ಪ ಗೌಡ ಪಿಜಕಳ ಉದ್ಘಾಟಿಸಲಿದ್ದಾರೆ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಅಧ್ಯಕ್ಷ ಪದ್ಮನಾಭ ಶೆಟ್ಟಿ ಸಭೆಯ ಅಧ್ಯಕ್ಷತೆವಹಿಸಲಿದ್ದಾರೆ. ಸುಳ್ಯ ಶಾಸಕ ಎಸ್.ಅಂಗಾರ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ,ಕ ಜಿಲ್ಲಾ ನಿರ್ದೆಶಕ ಚಂದ್ರಶೇಖರ ಕೆ ನೆಲ್ಯಾಡಿ, ತಾಲೂಕು ಪಂಚಾಯತಿ ಸದಸ್ಯರಾದ ಪಿ.ವೈ.ಕುಸುಮಾ, ಫಝಲ್ ಕೋಡಿಂಬಾಳ, ಎ.ಪಿ.ಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ, ಕಡಬ ಗ್ರಾ.ಪಂ.ಅಧ್ಯಕ್ಷ ಬಾಬು ಮುಗೇರ, ಮುಖಂಡರಾದ ಸದಾಶಿವ ರೈ ದಂಬೆಕಾನ, ಶಶಿಕುಮಾರ್ ರೈ ಬಾಲ್ಯೊಟ್ಟು, ಭಾಸ್ಕರ ಗೌಡ ಕೋಡಿಂಬಾಳ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Also Read  ಕಡಬ ಠಾಣಾ ಸಿಬ್ಬಂದಿ ಅಂಜನಪ್ಪ ಹುಟ್ಟೂರಿಗೆ ವರ್ಗಾವಣೆ ► ಠಾಣೆಯಲ್ಲಿ ಬೀಳ್ಕೊಡುಗೆ

ಜ.5 ನೇ ಮಂಗಳವಾರ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅಧ್ಯಕ್ಷತೆವಹಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು, ಯೋಜನೆಯ ಪ್ರಾದೇಶಿಕ ನಿರ್ದೆಶಕ ಮಾಹವೀರ ಅಜ್ರಿ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ.ವರ್ಗೀಸ್, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್ ಕೈಕುರೆ, ಎ.ಪಿ.ಎಂ.ಸಿ ನಿರ್ದೆಶಕರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ, ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಜನಜಾಗೃತಿ ವೇದಿಕೆಯ ಸಾಜಾ ರಾಧಾಕೃಷ್ಣ ಆಳ್ವಾ, ಕಡಬ ಸಿ.ಎ.ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ, ವಿಜಯಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ರಾಜೇಂದ್ರ ರೈ ಬೆಳ್ಳಿಪ್ಪಾಡಿ, ಶಿಬಿರದ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ► ಸಾಧಕ ಮಹಿಳೆಯರಿಂದ ಅರ್ಜಿ ಆಹ್ವಾನ

error: Content is protected !!
Scroll to Top