ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.comಕೋಡಿಂಬಾಡಿ,ಫೆ.05.ಕೋಡಿಂಬಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕರ, ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ನ ಸುಮಾರು 1.50 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಬಳಿಕ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭಾ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.ಪುತ್ತೂರು- ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿಗೆ 12 ಕೋಟಿ ರೂ. ಅನುದಾನ ಮಂಜೂರು ಗೊಂಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇದರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.

ಜನತೆಯ ಅಗತ್ಯಕ್ಕೆ ಅನುಗುಣವಾಗಿ ರಸ್ತೆಗಳೂ ಅಭಿವೃದ್ಧಿಯಾಗಬೇಕು. ಈ ನಿಟ್ಟಿನಲ್ಲಿ ಜಾಗದ ಆವಶ್ಯಕತೆ, ವಿದ್ಯುತ್‌ ಕಂಬಗಳ ಸ್ಥಳಾಂತರ, ನೀರಿನ ಪೈಪ್‌ಗ್ಳ ಬದಲಾವಣೆಗೆ ನಾಗರಿಕರ ಕಡೆಯಿಂದಲೂ ಸಹಕಾರದ ಅಗತ್ಯವಿದೆ. ಶಾಸಕನಾಗಿ ಆಯ್ಕೆಯಾದ ಬಳಿಕ 10 ಕೋಟಿ ರೂ. ಅನುದಾನವನ್ನು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹಂಚಲಾಗಿದೆ. ಸುಮಾರು 4.5 ಕೋಟಿ ರೂ. ಅನುದಾನದಲ್ಲಿ ಈಗಾಗಲೇ ಪುತ್ತೂರು -ಉಪ್ಪಿನಂಗಡಿ ರಸ್ತೆಯ ಕಾಮಗಾ ರಿಗಳು ಪೂರ್ಣಗೊಂಡಿವೆ ಎಂದರು.

Also Read  3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ

ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಸಂಧ್ಯಾ ರಾಮಚಂದ್ರ ಗೌಡ ಮಾತನಾಡಿ, ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸಲು ಅನುದಾನ ಒದಗಿಸುವ ಮೂಲಕ ಶಾಸಕರು ಶೀಘ್ರವಾಗಿ ಸ್ಪಂದಿಸಿದ್ದಾರೆ.ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ. ಅನುದಾನಗಳ ಮೂಲಕವೂ ಗ್ರಾಮದ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದರು.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಗ್ರಾಮದ ಜನತೆಯ ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕ್ಷೇತ್ರದ ಎಲ್ಲ ಗ್ರಾಮ ಗಳಿಗೂ ಅನುದಾನವನ್ನು ಶಾಸಕರು ಸಮಾನವಾಗಿ ಹಂಚುವ ಕಾರ್ಯ ನಡೆಸಿದ್ದಾರೆ. ಅಭಿವೃದ್ಧಿ ವ್ಯವಸ್ಥೆಗಳ ಸದುಪಯೋಗ ಆಗಬೇಕು ಎಂದರು.

 

ಜಿ.ಪಂ. ಸದಸ್ಯೆ ಶಯನಾ ಜಯಾನಂದ, ಮಾಜಿ ಸದಸ್ಯ ಕೇಶವ ಗೌಡ ಬಜತ್ತೂರು, ತಾ.ಪಂ. ಸದಸ್ಯ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ತಾ.ಪಂ. ಮಾಜಿ ಅಧ್ಯಕ್ಷ ಜಯಾನಂದ, ಗ್ರಾ.ಪಂ. ಉಪಾಧ್ಯಕ್ಷ ಬಾಬು ಗೌಡ, ಸದಸ್ಯರಾದ ಭವ್ಯಾ, ಯಶೋದಾ, ಭವಾನಿ, ಲಿಂಗಪ್ಪ ಹಾಗೂ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಉಪಸ್ಥಿತರಿದ್ದರು.ಬನ್ನೂರು ರೈತರ ಸೇ.ಸ. ಸಂಘದ ನಿರ್ದೇಶಕ ಮೋಹನ ಪಕ್ಕಳ ಕುಂಡಾಪು ಸ್ವಾಗತಿಸಿ, ರಾಮಚಂದ್ರ ಪೂಜಾರಿ ವಂದಿಸಿ ದರು. ಗ್ರಾ.ಪಂ. ಸದಸ್ಯ ಮನೋಹರ್‌ ಗೌಡ ಡಿ.ವಿ. ಕಾರ್ಯಕ್ರಮ ನಿರ್ವಹಿಸಿದರು.

Also Read  ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್!

 

error: Content is protected !!
Scroll to Top