ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗುರುವಾರದ ಕಲಾಪದ ವೇಳೆ 175 ಶಾಸಕರ ಹಾಜರಿದ್ದರು. ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು ಉಪಸ್ಥಿತರಿದ್ದರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಕಾಂಗ್ರೆಸ್ ನಿಂದ ಇವತ್ತು ಪ್ರತಾಪ್ ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಿ ಹಾಕಿದ್ದಾರೆ.

ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಹೇಳಿ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಮೈತ್ರಿ ಪಕ್ಷದ ನಾಯಕರು ಬಿಜೆಪಿಗೆ ಧಿಕ್ಕಾರ, ಬ್ಲೂ ಬಿಜೆಪಿಗೆ ಧಿಕ್ಕಾರ ಎಂದು ಕೂಗಿದರು. ಗಲಾಟೆ ಜಾಸ್ತಿಯಾಗುತ್ತಿದ್ದಂತೆ ಸ್ಪೀಕರ್ ಸದನವನ್ನು ಶುಕ್ರವಾರ ಮಧ್ಯಾಹ್ನ 12.30ಕ್ಕೆ ಮುಂದೂಡಿದರು.

Also Read  ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..!

ವಿಧಾನಸೌಧದಲ್ಲಿ ಶ್ರೀರಾಮುಲು ಮಾತನಾಡಿ, ಬಿಜೆಪಿ ಹೋರಾಟ ಸದನದಲ್ಲಿ ಇವತ್ತೂ ಮುಂದುವರಿದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ ಮಾಡಿದರೂ ಹಲವು ಶಾಸಕರು ಗೈರಾಗಿದ್ದಾರೆ. ಸರ್ಕಾರಕ್ಕೆ ಬಹುಮತವೇ ಇಲ್ಲ. ಹೀಗಾಗಿ ಸಿಎಂ ಈ ಕೂಡಲೇ ರಾಜೀನಾಮೆ ನೀಡಬೇಕು. ಸುಮಾರು 20 ಮಂದಿ ಶಾಸಕರಿಗೆ ಸಿಎಂ ಮೇಲೆ ವಿಶ್ವಾಸವಿಲ್ಲ. ನಾವು ಯಾರು ಆಪರೇಷನ್ ಕಮಲ ಮಾಡುತ್ತಿಲ್ಲ. ಇನ್ನಷ್ಟು ಕಾಂಗ್ರೆಸ್ ಶಾಸಕರು ಹೊರಬರುವ ಸಾಧ್ಯತೆಯಿದೆ ಎಂದು ಶ್ರೀರಾಮುಲು ಹೇಳಿದರು.

Also Read  ಕೊಣಾಜೆ: ಖಾಸಗಿ ಬಸ್ - ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top