ಕಡಬ: ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯುವಕ ಅಸ್ವಸ್ಥ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು



(ನ್ಯೂಸ್ ಕಡಬ) newskadaba.com ಕಡಬ, ಮಾ.18. ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಯುವಕನೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ.







ಮೃತ ಯುವಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಪದ್ಮಯ್ಯ ಗೌಡ ಎಂಬವರ ಪುತ್ರ ನಾಗೇಶ್(37) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಕಡಬ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.






error: Content is protected !!
Scroll to Top