(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ.06. ತಂದೆಯೇ ತನ್ನ 17 ವರ್ಷ ಪ್ರಾಯದ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಪ್ರಾಪ್ತ ಯುವತಿಯೋರ್ವಳನ್ನು ಆಕೆಯ ಅಕ್ಕನ ಗಂಡ ಅತ್ಯಾಚಾರ ಎಸಗಿದ ಬಗ್ಗೆ ಪೊಲೀಸ್ ದೂರು ದಾಖಲಾದ ಹಿನ್ನೆಲೆಯಲ್ಲಿ ಚೈಲ್ಡ್ ಹೆಲ್ಪ್ ಲೈನ್ ನವರು ಸಂತ್ರಸ್ತೆ ಯುವತಿಯನ್ನು ವಿಚಾರಣೆ ನಡೆಸಿದಾಗ ತನ್ನ ತಂದೆಯೂ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಾಲ್ಕು ಮದುವೆಯಾಗಿರುವ ಆರೋಪಿ ದಾವೂದ್ ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ್ದು, ಎರಡು ಬಾರಿ ಮನೆಯಲ್ಲಿ ಹಾಗೂ ಒಂದು ಬಾರಿ ಲಾಡ್ಜ್ ನಲ್ಲಿ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ಮಾಹಿತಿ ನೀಡಿದ್ದಾಳೆ.
ಈ ಬಗ್ಗೆ ಮೂಲತಃ ಪಾಣೆಮಂಗಳೂರು ನಿವಾಸಿ ಪ್ರಸ್ತುತ ಕುಕ್ಕಾಜೆಯಲ್ಲಿ ವಾಸ್ತವ್ಯ ಹೊಂದಿರುವ ಆರೋಪಿ ದಾವೂದ್ ನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.