ಮಂಗಳೂರು ಏಪ್ರಿಲ್ 30 ( ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ (ಕಿನ್ನಿಗೋಳಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪದವಿ ಪೂರ್ವ ವಿಜ್ಞಾನ ಕಾಲೇಜಿನ (ಪಿಸಿಎಂಬಿ ಮತ್ತು ಪಿಸಿಎಂಸಿ)ಗೆ 10ನೇತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳುಹಾಗೂ ಸರ್ಕಾರದ ಮೀಸಲಾತಿಯನ್ವಯ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾಥಿರ್üಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ ಹಾಗೂ ಸಿಇಟಿ ತರಬೇತಿ ಒದಗಿಸಲಾಗುವುದು. ಎಲ್ಲಾ ವರ್ಗದ ವಿದ್ಯಾರ್ಥಿ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. 2019-20ನೇ ಸಾಲಿಗೆ ಪ್ರಥಮ ಪಿಯುಸಿಗೆ 80 ವಿದ್ಯಾರ್ಥಿಗಳು (ಪಿಸಿಎಂಬಿ 40 ಮತ್ತು ಪಿಸಿಎಂಸಿ 40) ಹಾಗೂ ದ್ವಿತೀಯ ಪಿಯುಸಿಯಲ್ಲಿನ ಖಾಲಿ ಸ್ಥಾನಗಳಿಗೆ ಪ್ರವೇಶ ನೀಡಲಾಗುವುದು. ಶೇ. 50 ಸೀಟುಗಳು ವಿದ್ಯಾರ್ಥಿನಿಯರಿಗೆ ಕಾಯ್ದಿರಿಸಲಾಗಿದೆ. ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಮ್ಮಾಜೆ (ಕಿನ್ನಿಗೋಳಿ) ಮೆನ್ನುಬೆಟ್ಟು, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.