ನರಿಮೊಗರು: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ತೂಫಾನ್ ➤ ಬೈಕ್ ಸವಾರ ಆಲಂಕಾರು ನಿವಾಸಿಗೆ ಗಾಯ



(ನ್ಯೂಸ್ ಕಡಬ) newskadaba.com ಕಡಬ, ಮೇ.03. ತೂಫಾನ್ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ಬೈಕ್ ಸವಾರ ಗಾಯಗೊಂಡ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ಗುರುವಾರದಂದು ನಡೆದಿದೆ.







ಗಾಯಗೊಂಡ ಬೈಕ್ ಸವಾರನನ್ನು ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ಬೇರೊಂದು ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ವಿವಿಧ ಅಯಾಮಗಳಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.






error: Content is protected !!
Scroll to Top