(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಯೋಗದೊಂದಿಗೆ ಶ್ರೀ ಶಂಕರಾಚಾರ್ಯ ಜಯಂತಿ ತುಳು ಭವನ ಉರ್ವಸ್ಟೋರ್ ಇಲ್ಲಿ ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|| ಸೆಲ್ವಮಣಿ ಆರ್ ಇವರು ಶಂಕರಾಚಾರ್ಯರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಂಗಳೂರು ಹವ್ಯಕ ಸಭಾದ ಅಧ್ಯಕ್ಷ ಬಾಲ ಸುಬ್ರಹ್ಮಣ್ಯ ಕೆ. ಶ್ರೀ ಭಾರತಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಶ್ಯಾಮ ಸುಂದರ ಬಿ. ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಂಗಳೂರು ರಾಜೇಶ್.ಜಿ. ಹಾಗೂ ಇತರರು ಉಪಸ್ಥಿತರಿದ್ದರು.