ಮೇ 15 ರಂದು ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ (ಸಿಪಿಸಿ/ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆಯನ್ನು ಮೇ 15 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ಈಗಾಗಲೇ ಸಂದೇಶವನ್ನು ರವಾನಿಸಲಾಗಿರುತ್ತದೆ.

ಅಭ್ಯರ್ಥಿಗಳು ನಿಗದಿಪಡಿಸಿದ ದಿನದಂದು ಪೂವಾಹ್ನ 6.30 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನ್ನು ವೀಕ್ಷಿಸಬೇಕು. ಅಭ್ಯರ್ಥಿಗಳು ತಮಗೆ ಸಂಬಂಧಪಟ್ಟ ಕರೆ ಪತ್ರಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಅಧ್ಯಕ್ಷರು ನೇಮಕಾತಿ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ

error: Content is protected !!
Scroll to Top