ಗಡಿಯಾರ: ಬೈಕ್ ಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಗಂಭೀರ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮೇ.18. ಬೈಕ್ ಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಗಡಿಯಾರ ಸಮೀಪದ ಜೋಗಿಬೆಟ್ಟು ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.







ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಬೈಕ್ ಗಳು ಜೋಗಿಬೆಟ್ಟು ಅಪಾಯಕಾರಿ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಎರಡೂ ಬೈಕುಗಳ ಸವಾರರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರರಿಬ್ಬರು ಕಡೇಶಿವಾಲಯ ನಿವಾಸಿಗಳೆಂದು ತಿಳಿದುಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top