ದ.ಕ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಿಷೇಧಾಜ್ಷೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.22.ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ 2019 ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪುರಸಭೆಯ ವಾರ್ಡ್ ಸಂಖ್ಯೆ 1 ರಿಂದ ವಾರ್ಡ್ ಸಂಖ್ಯೆ 23 ರವರೆಗೆ, ಮುಲ್ಕಿ ಪಟ್ಟಣ ಪಂಚಾಯತ್ ನ ವಾರ್ಡ್ ಸಂಖ್ಯೆ 1 ರಿಂದ 18 ಮತ್ತು ಸುಳ್ಯ ಪಟ್ಟಣ ಪಂಚಾಯತ್‍ನ ವಾರ್ಡ್ ಸಂಖ್ಯೆ 1 ರಿಂದ 20 ರ ವ್ಯಾಪ್ತಿಯಲ್ಲಿ ಮಾತ್ರ ಮತದಾನದ ಸಲುವಾಗಿ ಮೇ 28 ರಂದು ಪೂರ್ವಾಹ್ನ 7 ಗಂಟೆಯಿಂದ ಮೇ 29 ರಂದು ಮಧ್ಯರಾತ್ರಿಯವರೆಗೆ ಮದ್ಯ ಮುಕ್ತ ದಿನಗಳೆಂದು(ಡ್ರೈಡೇಸ್) ಘೋಷಿಸಿ ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಸೂಚಿತ ಅವಧಿಯಲ್ಲಿ ಯಾವುದೇ ಹೊಟೇಲುಗಳಲ್ಲಾಗಲೀ ನಾನ್ ಪ್ರೊಪ್ರೈಟರ್‍ಗಳಲ್ಲಿ, ಸ್ಟಾರ್ ಹೋಟೆಲ್‍ಗಳಲ್ಲಾಗಲೀ ಮದ್ಯ ಮಾರಾಟ ಅಥವಾ ಸರಬರಾಜು ಮಾಡುವುದನ್ನು ಹಾಗೂ ಈ ದಿನಗಳಲ್ಲಿ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಿಗೆ ಇರುವಂತಹ ಅಂಗಡಿಗಳನ್ನು ಹಾಗೂ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಇವರು ಆದೇಶಿಸಿರುತ್ತಾರೆ.

Also Read  ಆಟೊ ಚಾಲಕ ಆತ್ಮಹತ್ಯೆ

error: Content is protected !!
Scroll to Top