ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಕಡಬ, ಮೇ.25. ಅನಾರೋಗ್ಯದಿಂದ ಬಳಲುತ್ತಿದ್ದ ಪಂಚಾಯತ್ ಸಿಬ್ಬಂದಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಡೆದಿದೆ.







ಆತ್ಮಹತ್ಯೆ ಮಾಡಿಕೊಂಡವರನ್ನು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಉದ್ಯೋಗಿ ವಿಕ್ರಮ್ ರೈ(39) ಎಂದು ಗುರುತಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರದಂದು ಬೆಳಿಗ್ಗೆ ತನ್ನ ಮನೆಯ ಪಕ್ಕದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top