(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ.
ದಕ್ಷಿಣ ಕನ್ನಡ ಮಂಗಳೂರು, ದಂತ ಆರೋಗ್ಯ ವಿಭಾಗ(ಎಮ್.ಸಿ.ಒ.ಡಿ.ಎಸ್), ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ದಿನಾಚರಣೆ -2019 ಮಂಗಳೂರು ನಗರ ಕೋಟ್ಪಾ-2003 ಕಾಯಿದೆಯ ಉನ್ನತ ಅನುಷ್ಠಾನದ ಘೋಷಣೆ ಮೇ31 ರಂದು ಪೂರ್ವಾಹ್ನ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ.ಜಿ ಗಂಗಾಧರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.