ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಪಾಣೆಮಂಗಳೂರು ಮತ್ತು ವಾಮದಪದವು ಹಾಗೂ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಕಲ್ಲಡ್ಕ ಮತ್ತು ವಿಟ್ಲ ಇಲ್ಲಿಗೆ 5ನೇ ತರಗತಿಯಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅಭ್ಯರ್ಥಿಗಳು ಅರ್ಜಿಯೊಂದಿಗೆ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕ ಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ ಹಾಗೂ ತಹಶೀಲ್ದಾರರಿಂದ ಪಡೆದ ಜಾತಿ/ ಆದಾಯ ಪ್ರಮಾಣ ಪತ್ರದ ದೃಢೀಕೃತ ಪ್ರತಿಯನ್ನು ನೀಡಬೇಕು. ವಿದ್ಯಾರ್ಥಿನಿಲಯಕ್ಕೆ ಸೇರುವ ಅಭ್ಯರ್ಥಿಗಳು ವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಪೋಷಕರ ವಾರ್ಷಿಕ ಆದಾಯದ ಮಿತಿ ರೂ.44,500/-, ವರ್ಗ-1ರ ವಿದ್ಯಾರ್ಥಿಗಳಿಗೆ ರೂ.1 ಲಕ್ಷ ಇರಬೇಕು.

Also Read  ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!!

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರುಗಳಿಂದ ಅಥವಾ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಯವರ ಕಚೇರಿ, ತಾಲೂಕು ಪಂಚಾಯತ್ ಕಟ್ಟಡ ಬಂಟ್ವಾಳ ಇಲ್ಲಿಂದ ಕಚೇರಿ ಸಮಯದಲ್ಲಿ ಪಡೆದುಕೊಳ್ಳಬಹುದು. ವಿದ್ಯಾರ್ಥಿ ನಿಲಯಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಊಟ, ವಸತಿ ಮತ್ತು ಇತರೆ ಸೌಲಭ್ಯಗಳನ್ನು ಸರಕಾರದ ವತಿಯಿಂದ ಉಚಿತವಾಗಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 20 ಎಂದು ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಬಳ್ಳಾರಿ ಪಾಲಿಕೆ ನೂತನ ಮೇಯರ್​ ಆಗಿ ತ್ರಿವೇಣಿ ಆಯ್ಕೆ   ➤ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆ

error: Content is protected !!
Scroll to Top