ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ➤ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಗಳಿಗೆ ದಾಖಲಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಬೋಳಾರ ಮಂಗಳೂರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಚಿಲಿಂಬಿ, ದೇರಳಕಟ್ಟೆ, ಗುರುಕಂಬ್ಲ, ಬೆಂಜನಪದವು ಹಾಗೂ ಕಡಬ ಇಲ್ಲಿಗೆ ದಾಖಲಾತಿಗೆ ಅರ್ಜಿ ಆಹ್ವಾನಿಸಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಮತ್ತು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಇವರನ್ನು ಸಂಪರ್ಕಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಕಡಬ: ಆಕ್ಟಿವಾ - ಓಮ್ನಿ ಢಿಕ್ಕಿ ► ಯುವತಿಗೆ ಗಾಯ

error: Content is protected !!
Scroll to Top